ನವದೆಹಲಿ, ಅ.17 (DaijiworldNews/PY): ದೇಶದಲ್ಲಿ ಸತತ 4ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದ್ದು, ಇಂದು ಪೆಟ್ರೋಲ್ ದರ 36 ಪೈಸೆ, ಡೀಸೆಲ್ ದರ 35 ಪೈಸೆ ಏರಿಕೆಯಾಗಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ 105.84 ರೂ ಹಾಗೂ ಡೀಸೆಲ್ 94.57 ರೂ.ಗೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 109.53 ರೂ. ಹಾಗೂ ಡೀಸೆಲ್ ಬೆಲೆ 100.37 ರೂ.ಗೆ ಹೆಚ್ಚಳವಾಗಿದೆ.
ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ ರೂ.111.77ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 102.52ರೂ ಗೆ ಏರಿಕೆಯಾಗಿದೆ.
ರಾಯಚೂರಿನಲ್ಲಿ ಲೀಟರ್ ಡೀಸೆಲ್ ಬೆಲೆ 100.25 ರೂ., ತುಮಕೂರಿನಲ್ಲಿ ಲೀಟರ್ ಡೀಸೆಲ್ ಬೆಲೆ 100.84 ರೂ., ಕಲಬುರಗಿಯಲ್ಲಿ ಲೀಟರ್ ಡೀಸೆಲ್ ಬೆಲೆ 100.16 ರೂ. ಹಾಗೂ ರಾಮನಗರದಲ್ಲಿ ಲೀಟರ್ ಡೀಸೆಲ್ ಬೆಲೆ 100.67 ರೂಪಾಯಿಗೆ ಏರಿಕೆಯಾಗಿದೆ.
ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 106.43ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 97.68ರೂ ಗೆ ಏರಿಕೆಯಾಗಿದೆ.