ಬೆಂಗಳೂರು, ಅ.17 (DaijiworldNews/HR): ಬೆಂಗಳೂರಿನ ಅನ್ನಪೂರ್ಣಶ್ವರಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿ ಮೃತ ದೇಹವನ್ನು ಕೊಲೆಗಾರರೇ ಠಾಣೆಗೆ ಕರೆ ತಂದ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಕೊಲೆಯಾದ ವ್ಯಕ್ತಿಯನ್ನು ಬಾಸ್ಕರ್ ಎಂದು ಗುರುತಿಸಲಾಗಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೋಲಿಸರು ಬಂಧಿಸಿದ್ದು, ಘಟನೆಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿಯನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.