ತಿರುವನಂತಪುರಂ, ಅ.17 (DaijiworldNews/HR): ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದಿಂದಾಗಿ ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೊಟ್ಟಿಕ್ಕಾಲ್ನಲ್ಲಿ ನಡೆದ ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಇಡುಕ್ಕಿಯಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ 4 ಜನರು ಮೃತಪಟ್ಟಿದ್ದು, ಕೊಟ್ಟಾಯಂನ ಕೊಟ್ಟಿಕ್ಕಾಲ್ನಲ್ಲಿ 9 ಜನರು ಸಾವನ್ನಪ್ಪಿದ್ದಾರೆ.
ಇನ್ನು ಭೂ ಕುಸಿತದಿಂದಾಗಿ ಕೊಟ್ಟಾಯಂ ಗ್ರಾಮೀಣ ಪ್ರದೇಶದಲ್ಲಿ 12 ಜನರು ನಾಪತ್ತೆಯಾಗಿದ್ದು, ಪೊಲೀಸರು ಮತ್ತು ಅಗ್ನಿ ಶಾಮಕದಳವರು ಭಾನುವಾರ ಕೂಡ ಸ್ಥಳಕ್ಕೆ ತಲುಪಲು ಸಾಧ್ಯವಾಗಿಲ್ಲ. ಇಡುಕ್ಕಿ ಜಿಲ್ಲೆಯ ತೊಡುಪುಳದಲ್ಲಿ ಒಬ್ಬರು ಮೃತಪಟ್ಟಿದ್ದಾರೆ.