ನವದೆಹಲಿ, ಅ.17 (DaijiworldNews/HR): ಕೇರಳ ಭಾರಿ ಮಳೆ ಹಾಗೂ ಪ್ರವಾಹ ಉಂಟಾಗಿದ್ದು, ನಮ್ಮಿಂದ ಸಾಧ್ಯವಿರುವ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ಮಳೆ ಮತ್ತು ಪ್ರವಾಹಕ್ಕೀಡಾಗಿರುವ ಕೇರಳದ ವಿವಿಧ ಪ್ರದೇಶಗಳ ಮೇಲೆ ನಿರಂತರ ನಿಗಾ ಇರಿಸಿದ್ದೇವೆ. ಕೇಂದ್ರ ಸರ್ಕಾರವು ಎಲ್ಲ ರೀತಿಯ ನೆರವು ನೀಡಲಿದೆ. ರಕ್ಷಣಾ ಕಾರ್ಯಾಚರಣೆಗೆ ನೆರವಾಗಲು ಎನ್ಡಿಆರ್ಎಫ್ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ) ತಂಡಗಳು ಈಗಾಗಲೇ ಅಲ್ಲಿಗೆ ತಲುಪಿದ್ದು, ಎಲ್ಲರ ಸುರಕ್ಷತೆಗಾಗಿ ಪ್ರಾರ್ಥಿಸುತ್ತಿದ್ದೇವೆ" ಎಂದಿದ್ದಾರೆ.
ಇನ್ನು ಎನ್ಡಿಆರ್ಎಫ್ನ 11 ತಂಡಗಳು ಕೇರಳದಲ್ಲಿ ಶೋಧ, ರಕ್ಷಣೆ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಭಾರಿ ಮಳೆಯಿಂದಾಗಿ ಕೋಟಯಂ, ಪಟ್ಟಣಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಹಲವೆಡೆ ಭೂಕುಸಿತ ಸಂಭವಸಿದೆ.