ಸೂರತ್, ಅ.18 (DaijiworldNews/PY): ಪ್ಯಾಕೇಜಿಂಗ್ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ಗುಜರಾತ್ನ ಸೂರತ್ನಲ್ಲಿ ನಡೆದಿದೆ.
ಇಂದು ಬೆಳಗ್ಗೆ ಸೂರತ್ನ ಕಡೋದರದ ವರೇಲಿ ಎಂಬಲ್ಲಿನ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
"ಬೆಳಗ್ಗಿನ ಜಾವ 4.30 ರ ಸುಮಾರಿಗೆ ವಿವಾ ಪ್ಯಾಕೇಜಿಂಗ್ ಕಂಪನಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ" ಎಂದು ಕಡೋದರ ಪೊಲೀಸ್ ಇನ್ಸ್ಪೆಕ್ಟರ್ ಹೇಮಂತ್ ಪಟೇಲ್ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರೆ ಪ್ರಾರಂಭಿಸಿದ್ದು, ಇಲ್ಲಿಯವರೆಗೆ 125 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ.