ವಿರಾಜಪೇಟೆ, ಅ.18 (DaijiworldNews/HR): ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತ ಗ್ರಾಮ ಪಂಚಾಯಿತಿ ಸದಸ್ಯೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.
ಸಾಂದರ್ಭಿಕ ಚಿತ್ರ
ಅರ್ವತೊಕ್ಲು ಗ್ರಾಮ ಪಂಚಾಯಿತಿ ಸದಸ್ಯೆಯಾಗಿದ್ದ ರಮ್ಯಾ( 28) ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.
ಇನ್ನು ಈ ವಿಷಯ ಗೊತ್ತಾಗುತ್ತಿದ್ದಂತೆ ವಿರಾಜಪೇಟೆಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಚೇತರಿಸಿಕೊಂಡಿದ್ದ ರಮ್ಯಾ ಭಾನುವಾರ ಡಿಸ್ಚಾರ್ಜ್ ಆಗಿ ಮನೆಗೆ ವಾಪಸ್ ಆಗಿದ್ದರು.
ಮನೆಗೆ ಬಂದ ಬಳಿಕ ಏಕಾಏಕಿ ಹೊಟ್ಟೆನೋವು ಕಾಣಿಸಿಕೊಂಡ ಪರಿಣಾಮ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಕೌಟುಂಬಿಕ ಕಲಹಕ್ಕೆ ಬೇಸತ್ತ ರಮ್ಯಾ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದ್ದು, ಈ ಬಗ್ಗೆ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ