ಶಿವಮೊಗ್ಗ, ಅ.18 (DaijiworldNews/HR): ಆರ್ಎಸ್ಎಸ್ ದೇಶ ಪ್ರೇಮಿಯನ್ನು ಬೆಳೆಸುವ ಸಂಸ್ಥೆ ಹೊರತು ದೇಶದ ಮೇಲೆ ಬಾಂಬ್ ಹಾಕುವವರನ್ನು ಅಲ್ಲ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಮಂಗಳೂರಿನಲ್ಲಿ ಹಿಂದೂ ಪರ ಸಂಘಟನೆಗಳು ತ್ರಿಶೂಲ ಹಂಚಿದ್ದನ್ನು ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ. ತ್ರಿಶೂಲ ಧಾರಣೆ ಆರ್ಎಸ್ಎಸ್ನ ವರ್ಷದ ಕಾರ್ಯಕ್ರಮಗಳಲ್ಲಿ ಒಂದು. ಸಿದ್ದರಾಮಯ್ಯ ಅವರು ತ್ರಿಶೂಲ ಹಂಚಿಕೆ ವಿಚಾರದಲ್ಲಿ ಅನಗತ್ಯ ಪ್ರಸ್ತಾಪ ಮಾಡುತ್ತಿದ್ದಾರೆ" ಎಂದರು.
ಇನ್ನು "ಆರ್ಎಸ್ಎಸ್ ವಿರುದ್ಧ ಮಾತನಾಡಿದಷ್ಟೂ ಅಲ್ಪಸಂಖ್ಯಾತರ ಮತ ತಮಗೆ ಬರುತ್ತದೆ ಎಂಬ ಉದ್ದೇಶದಿಂದ ಅವರು ಹಾಗೆ ಮಾಡುತ್ತಿದ್ದಾರೆ. ಉಪಚುನಾವಣೆಯಲ್ಲಿ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಸರ್ಕಾರದ ಸಾಧನೆಗಳ ಬಗ್ಗೆ ಚರ್ಚೆ ಆಗುತ್ತದೆ. ಅದರ ಆಧಾರದ ಮೇಲೆಯೇ ಚುನಾವಣೆ ನಡೆಯಲಿದೆ" ಎಂದು ಹೇಳಿದ್ದಾರೆ.