ಬೆಂಗಳೂರು, ಅ.18 (DaijiworldNews/HR): ರಾಜ್ಯ ಸರ್ಕಾರವು ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ಖಾಸಗೀಕರಣ ಮಾಡುವ ನಿರ್ಧಾರದಿಂದ ಹಿಂದೆ ಸರಿದಿದ್ದು, ಈ ಬಗ್ಗೆ ಇಂದು ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಈ ಕುರಿತು ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮೈಶುಗರ್ ಪುನಶ್ಚೇತನಕ್ಕೆ ಕ್ರಮಕ್ಕೆ ಸೂಚನೆ ನೀಡಲಾಗಿದ್ದು, ಕಬ್ಬಿನ ಉಪ ಉತ್ಪನ್ನಗಳನ್ನು ತಯಾರಿಸಲು ಆದ್ಯತೆ ನೀಡಲಾಗುವುದು" ಎಂದರು.
ಇನ್ನು ತಕ್ಷಣ ಅಧಿಕಾರಿಯನ್ನು ಎಂಡಿಯಾಗಿ ನೇಮಕ ಮಾಡಲು ತೀರ್ಮಾನ ಮಾಡಲಾಗಿದ್ದು, ಅಗತ್ಯ ಯಂತ್ರಗಳನ್ನು ಸರಿಪಡಿಸಲು ಈಗಿನಿಂದಲೇ ಕ್ರಮ ಕೈಗೊಳ್ಳಲಾಗುವುದು. ಖಾಸಗಿಕರಣ ಮಾಡುವ ಪ್ರಸ್ತಾಪ ಸದ್ಯಕ್ಕೆ ವಾಪಸು ಪಡೆಯುತ್ತೇವೆ. ಎಲ್ಲಾ ಪರಿಶೀಲನೆ ನಡೆಸಿದ ಬಳಿಕ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡು ಅಗತ್ಯ ಹಣಕಾಸು ನೆರವು ನೀಡಲಾಗುವುದು" ಎಂದಿದ್ದಾರೆ.
ಸಂಸದೆ ಸುಮಲತಾ ಅಂಬರೀಶ್ ಮಾತನಾಡಿ, ಇಂದಿನ ಸಭೆಯಲ್ಲಿ ಅನೇಕ ವಿಷಯ ಚರ್ಚೆ ಮಾಡಿದ್ದು, ರೈತರ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದು, ಯಾವ ಮಾದರಿಯಲ್ಲಾದರೂ ಕಾರ್ಖಾನೆ ಆರಂಭಿಸಬೇಕೆಂದು ಮನವಿ ಮಾಡಿರುವುದಾಗಿ ತಿಳಿಸಿದರು.