ಬೆಂಗಳೂರು, ಅ.18 (DaijiworldNews/PY): "ದೇಶದಲ್ಲಿ ಸಾಕಷ್ಟು ಶಾಲೆಗಳಿದ್ದವು, ಆದರೆ 50 ವರ್ಷ ಮೇಲ್ಪಟ್ಟ ಅತಿ ಹಿರಿಯ ಯುವನಾಯಕ ಭಾರತದಲ್ಲಿ ಓದಲೇ ಇಲ್ಲ. ವಯಸ್ಕರ ಶಿಕ್ಷಣ ಯೋಜನೆಯಿದ್ದರೂ ಪಪ್ಪುವಿನ ಬುದ್ಧಿ ಬೆಳೆಯಲೆ ಇಲ್ಲ" ಎಂದು ಬಿಜೆಪಿ ಲೇವಡಿ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, "ದೇಶದಲ್ಲಿ ಸಾಕಷ್ಟು ಶಾಲೆಗಳಿದ್ದವು, ಆದರೆ 50 ವರ್ಷ ಮೇಲ್ಪಟ್ಟ ಅತಿ ಹಿರಿಯ ಯುವನಾಯಕ ಭಾರತದಲ್ಲಿ ಓದಲೇ ಇಲ್ಲ. ವಯಸ್ಕರ ಶಿಕ್ಷಣ ಯೋಜನೆಯಿದ್ದರೂ ಪಪ್ಪು ವಿನ ಬುದ್ಧಿ ಬೆಳೆಯಲೆ ಇಲ್ಲ. ತಾತ, ಮುತ್ತಾತ, ಅಪ್ಪ ಪ್ರಧಾನಿ ಆಗಿದ್ದಾರೆ ಎಂಬ ಒಂದೇ ಅರ್ಹತೆಯ ಆಧಾರದ ಮೇಲೆ ತಾನು ಪ್ರಧಾನಿಯಾಗುತ್ತೇನೆ ಎಂದು ಭಿಕ್ಷುಕನಂತೆ ಅಲೆಯುತ್ತಿದ್ದಾನೆ" ಎಂದಿದೆ.
"ಹೌದು ನಮ್ಮ ಪ್ರಧಾನಿ, ನಿಮ್ಮ ನಾಯಕರಿಗಿಂತ ವಿಭಿನ್ನವಾಗಿದ್ದಾರೆ. ಪ್ರಧಾನಿಯಾಗಿ ಇನ್ನೊಬ್ಬ ಮಹಿಳೆಯ ಸಿಗರೇಟಿಗೆ ಬೆಂಕಿ ಹಚ್ಚಲಿಲ್ಲ. ಬಾರ್ನಲ್ಲಿ ಡ್ಯಾನ್ಸ್ ಮಾಡಲಿಲ್ಲ. ಮಾದಕ ವಸ್ತು ಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿಲ್ಲ. ದೇಶಕ್ಕೆ ಸಮರ್ಪಿತ ಜೀವವದು, ತನ್ನ ಕುಟುಂಬಕ್ಕಲ್ಲ" ಎಂದು ತಿರುಗೇಟು ನೀಡಿದೆ.
"ಕಾಂಗ್ರೆಸ್ ಶಾಲೆಗಳನ್ನು ಕಟ್ಟಿಸಿತ್ತು, ಆದರೂ ಪ್ರಧಾನಿ ನರೇಂದ್ರ ಮೋದಿ ಓದಲಿಲ್ಲ, ವಯಸ್ಕರ ಶಿಕ್ಷಣ ಯೋಜನೆಯನ್ನೂ ಮಾಡಿತ್ತು ಆದರೂ ಓದಲಿಲ್ಲ, ಭಿಕ್ಷಾಟನೆ ನಿಷೇಧವಿದ್ದರೂ ಭಿಕ್ಷೆ ಬೇಡುವ ಸೋಂಬೇರಿ ಜೀವನದ ಗೀಳಿಗೆ ಬಿದ್ದವರು ಇಂದು ದೇಶವಾಸಿಗಳನ್ನು ಬಿಕ್ಷುಕರನ್ನಾಗಿಸಿದ್ದಾರೆ. ಹೆಬ್ಬೆಟ್ಟುಗಿರಾಕಿಮೋದಿಯಿಂದ ದೇಶ ನರಳುತ್ತಿದೆ" ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು.