ಹಾನಗಲ್, ಅ. 18 (DaijiworldNews/SM): ಉಪಚುನಾವಣೆಗೆ ಸಿದ್ಧತೆಗಳು ಚುರುಕುಗೊಂಡಿವೆ. 'ಹಾನಗಲ್ ಕ್ಷೇತ್ರದ ಜನರು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಪಕ್ಷ ಸಿದ್ಧತೆ ಮಾಡುತ್ತಿದೆ. ಹಾನಗಲ್ ಕ್ಷೇತ್ರದ ಜನರು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಹಾನಗಲ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ನಡೆಯಲಿರುವ ಉಪ ಕದನದಲ್ಲಿ ಬಿಜೆಪಿ ಗೆಲ್ಲಲಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಕಾಮನ್ ಮ್ಯಾನ್ ಆಗಿದ್ದು, ಜನಪರ ಕೆಲಸ ನಿರ್ವಹಿಸುತ್ತಿದ್ದಾರೆ. ಅವರ ಆಡಳಿತವನ್ನು ಜನರು ಮೆಚ್ಚಿಕೊಂಡಿದ್ದಾರೆ. ರಾಜ್ಯದ ಜನರೆಲ್ಲರೂ ಮುಖ್ಯಮಂತ್ರಿಗಳನ್ನು ಪ್ರೀತಿಯಿಂದ ನೋಡುತ್ತಿದ್ದಾರೆ. ಹೀಗಾಗಿ ಕ್ಷೇತ್ರದ ಜನರು ನೀಡುವ ಮತ ನೇರವಾಗಿ ಮುಖ್ಯಮಂತ್ರಿಗಳಿಗೆ ನೀಡಿದಂತಾಗುತ್ತದೆ.
ಇದು ಬಸವರಾಜ ಬೊಮ್ಮಾಯಿರವರು ಸಿಎಂ ಆದ ಬಳಿಕ ಎದುರಿಸುತ್ತಿರುವ ಮೊದಲ ಉಪಚುನಾವಣೆಯಾಗಿದ್ದು, ಪ್ರತಿಷ್ಠೆ ಅಲ್ಲ ಎಂದು ಅವರೇ ಹೇಳಿದ್ದಾರೆ. ಆದರೆ ಇದು ಹಾನಗಲ್ ಕ್ಷೇತ್ರದ ಭವಿಷ್ಯದ ಪ್ರಶ್ನೆಯಾಗಿದೆ ಎಂದು ಸಿಎಂ ಹೇಳಿದ್ದಾರೆ,'' ಎಂದು ಸಚಿವರು ಪುನರುಚ್ಚರಿಸಿದ್ದಾರೆ.