ಕಲಬುರಗಿ, ಅ.19 (DaijiworldNews/HR): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಅಡಿಯಿಂದ ಮುಡಿಯವರೆಗೆ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಬೆಲೆ ಏರಿಕೆ ಮಾಡಿ ಬಿಜೆಪಿ ಸರ್ಕಾರ ಜನರಿಂದ ಲೂಟಿ ಮಾಡುತ್ತಿದೆ" ಎಂದು ಆರೋಪಿಸಿದ್ದಾರೆ.
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಯಾವ ರಾಜ್ಯದಲ್ಲೂ ದಲಿತ ಮುಖ್ಯಮಂತ್ರಿ ಮಾಡಿಲ್ಲ. ಕಾಂಗ್ರೆಸ್ ಪಕ್ಷ ಪಂಜಾಬ್ ನಲ್ಲಿ ದಲಿತ ಮುಖ್ಯಮಂತ್ರಿ ಮಾಡಿದೆ" ಎಂದಿದ್ದಾರೆ.
ಕರ್ನಾಟಕದಲ್ಲಿ ಇರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಭ್ರಷ್ಟಾಚಾರಲ್ಲೇ ಮುಳುಗಿದ್ದು, ಜನರು ಮುಂದಿನ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಳುಹಿಸಲಿದ್ದಾರೆ ಎಂದು ಹೇಳಿದ್ದಾರೆ.