ಉತ್ತರಾಖಂಡ, ಅ.19 (DaijiworldNews/HR): ಉತ್ತರಾಖಂಡದಲ್ಲಿ ಇಂದು ದಿಢೀರ್ ಮೇಘಸ್ಪೋಟದೊಂದಿಗೆ ಸುರಿದಂತ ಭಾರೀ ಮಳೆಯಿಂದಾಗಿ 16 ಜನರು ಮೃತಪಟ್ಟಿದ್ದು, ಅನೇಕ ಮಂದಿ ನಾಪತ್ತೆಯಾಗಿರೋದಾಗಿ ತಿಳಿದು ಬಂದಿದೆ.
ಈ ಕುರಿತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮಾಹಿತಿ ನೀಡಿದ್ದು, ಪ್ರಧಾನಮಂತ್ರಿ ಮತ್ತು ಗೃಹ ಸಚಿವರಿಗೆ ರಾಜ್ಯದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವಿವರಿಸಲಾಗಿದೆ. ಅನೇಕ ಸ್ಥಳಗಳಲ್ಲಿ ಮನೆಗಳು, ಸೇತುವೆಗಳು ಇತ್ಯಾದಿಗಳು ಹಾನಿಗೊಳಗಾಗಿವೆ. ಈವರೆಗೆ 16 ಮಂದಿ ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಮೂರು ಹೆಲಿಕಾಪ್ಟರ್ ಗಳನ್ನು ನಿಯೋಜಿಸಲಾಗಿದೆ" ಎಂದು ತಿಳಿಸಿದ್ದಾರೆ.
ಇನ್ನು ನೀರಿನ ಮಟ್ಟದಲ್ಲಿ ಏರಿಕೆಯಾಗಿ ಚಂಪಾವತ್ ನಲ್ಲಿನ ಚಲ್ತಿ ನದಿ ಮೇಲಿನ ನಿರ್ಮಾಣ ಹಂತದ ಸೇತುವೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ನೈನಿತಾಲ್ ನ ಮನೆಗಳು ಹಾಗೂ ಕಟ್ಟಡಗಳು ನೀರು ನುಗ್ಗಿದ್ದು, ಜನರು ತೀವ್ರ ತೊಂದರೆ ಎದುರಿಸುವಂತಾಗಿದೆ.