ಉತ್ತರಾಖಂಡ್, ಅ. 19 (DaijiworldNews/SM): ಕಳೆದೆರಡು ದಿನಗಳಿಂದ ಉತ್ತರಾಖಂಡ್ ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಾಗುತ್ತಿದೆ. ಇದರಿಂದಾಗಿ ಹಲವು ಕಡೆ ಭೂ ಕುಸಿತ ಗುಡ್ಡ ಕುಸಿತವುಂಟಾಗಿದೆ. ಘಟನೆಯಿಂದಾಗಿ ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ಈ ನಡುವೆ ರಾಜ್ಯದಲ್ಲಿನ ಮಳೆ ಪರಿಸ್ಥಿತಿ ಬಗ್ಗೆ ಪ್ರಧಾನಿ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ ಹಾನಿಗೀಡಾದ ಪ್ರದೇಶಗಳಿಗೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ನೆರವಾಗುವುದಾಗಿ ಅವರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಕರೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ತಲೆದೋರಿಸುವ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಇನ್ನು ಸುರಕ್ಷತೆಯ ದೃಷ್ಟಿಯಿಂದ ಚಾರ್ ದಾಮ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇನ್ನು 13 ಜಿಲ್ಲೆಯಾದ್ಯಂತ ರಾಜ್ಯ ವಿಪತ್ತು ನಿರ್ವಹಣಾ ಪಡೆಯ 34 ತಂಡಗಳನ್ನು ರಾಜ್ಯ ಸರ್ಕಾರ ಈಗಾಗಲೇ ನಿಯೋಜಿಸಿದೆ.