ವಿಜಯಪುರ, ಅ.20 (DaijiworldNews/PY): "ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಡ್ರಗ್ ಪೆಡ್ಲರ್ ಎಂದು ಹೇಳಿರುವುದು ಸರಿಯಲ್ಲ" ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, "ನಳಿನ್ ಕುಮಾರ್ ಕಟೀಲ್ ಅವರು ರಾಹುಲ್ ಗಾಂಧಿ ಅವರನ್ನು ಡ್ರಗ್ ಪೆಡ್ಲರ್ ಎಂದು ಕರೆದಿರುವುದು ಸರಿಯಲ್ಲ. ಈ ರೀತಿಯಾಗು ಅಗೌರವದಿಂದ ಮಾತನಾಡುವುದು ಸೂಕ್ತವಲ್ಲ" ಎಂದಿದ್ದಾರೆ.
"ಯಾರೂ ಯಾರ ಬಗ್ಗೆಯೂ ಈ ರೀತಿಯಾಗಿ ಅಗೌರವದಿಂದ ಮಾತನಾಡಬಾರದು. ರಾಹುಲ್ ಗಾಂಧಿ ಬಗ್ಗೆ ಗೌರವವಿದೆ" ಎಂದು ಹೇಳಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಆರ್ಎಸ್ಎಸ್ ಹೇಳಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಹೆಚ್ಡಿಕೆ ಹಾಗೂ ಸಿದ್ದರಾಮಯ್ಯ ಅವರು ಅನಗತ್ಯವಾಗಿ ಆರ್ಎಸ್ಎಸ್ ಅನ್ನು ಎಳೆದು ತರುತ್ತಿದ್ದಾರೆ. ಆದರೆ, ಅವರಿಗೆ ಇದರಿಂದ ಯಾವುದೇ ರೀತಿಯಾದ ಲಾಭ ಇಲ್ಲ" ಎಂದು ತಿಳಿಸಿದ್ದಾರೆ.
"ಉಪಚುನಾವಣೆಯಲ್ಲಿ ಜನರು ಹೆಚ್ಡಿಕೆ ಹಾಗೂ ಸಿದ್ದರಾಮಯ್ಯ ಅವರಿಗೆ ಉತ್ತರ ನೀಡಲಿದ್ದಾರೆ" ಎಂದು ಹೇಳಿದ್ದಾರೆ.