ಮುಂಬೈ, ಅ. 20(DaijiworldNews/HR): ಹೈಪ್ರೋಫೈಲ್ ಡ್ರಗ್ ಪ್ರಕರಣದಲ್ಲಿ ಬಂಧಿತರಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಮತ್ತು ಇತರ ಮೂವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು, ಮುಂಬೈನ ಎನ್ ಡಿ ಪಿಎಸ್ ವಿಶೇಷ ನ್ಯಾಯಾಲಯವು ವಜಾಗೊಳಿಸಿದೆ.
ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಮುಂಬೈನ ಕಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಮುಂಬೈನ ಎನ್ ಡಿ ಪಿಎಸ್ ವಿಶೇಷ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು.
ಇನ್ನು ಈ ಜಾಮೀನು ಅರ್ಜಿಯ ಕುರಿತಂತೆ ವಿಚಾರಣೆ ನಡೆಸಿದ್ದಂತ ಎನ್ ಡಿ ಪಿ ಎಸ್ ಕೋರ್ಟ್, ಇಂದಿಗೆ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತನ್ನ ತೀರ್ಪು ಪ್ರಕಟಿಸಿರುವಂತ ಎನ್ ಡಿ ಪಿಎಸ್ ವಿಶೇಷ ಕೋರ್ಟ್ ಆರ್ಯನ್ ಖಾನ್, ಅರ್ಬಜ್ ಮರ್ಚೆಂಟ್ ಹಾಗೂ ಮನ್ಮುಡು ದಮಚ್ಚಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.