ಶ್ರೀನಗರ, ಅ. 20 (DaijiworldNews/SM): ಕಾಶ್ಮೀರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ. ಇದರಿಂದಾಗಿ ಕೇಂದ್ರಾಡಳಿತ ಪ್ರದೇಶದಲ್ಲಿ ಹದಿನೇಳು ಉಗ್ರರನ್ನು ಹತ್ಯೆ ಮಾಡಿದಂತಾಗಿದೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರರನ್ನು ಹತ್ಯೆ ಮಾಡಲಾಗಿದೆ. ಕೇಂದ್ರಾಡಳಿತ ಪ್ರದೇಶ ಕಾಶ್ಮೀರದಲ್ಲಿ ಕಳೆದ 15 ದಿನಗಳಲ್ಲಿ 17 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಭದ್ರತಾ ಪಡೆಗಳ ಜಂಟಿ ತಂಡಗಳಿಂದ ಶೋಧ ಕಾರ್ಯಾಚರಣೆ ನಡೆಸಿ ಉಗ್ರರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಲಷ್ಕರ್-ಎ-ತೊಯ್ಬಾಗೆ ಸೇರಿದ ದಿ ರೆಸಿಸ್ಟೆನ್ಸ್ ಫ್ರಂಟ್ ಸಂಘಟನೆಯ ಇಬ್ಬರನ್ನು ಹತ್ಯೆ ಮಾಡಲಾಗಿದೆ.
ಇನ್ನು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಕೂಡ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದರು.