ಜೈಪುರ, ಅ.21 (DaijiworldNews/PY): 7ನೇ ತರಗತಿಯ ವಿದ್ಯಾರ್ಥಿಯನ್ನು ಶಿಕ್ಷಕ ಥಳಿಸಿ ಹತ್ಯೆ ಮಾಡಿದ್ದು, ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿಯನ್ನು ಗಣೇಶ್ (13) ಎಂದು ಗುರುತಿಸಲಾಗಿದೆ. ಈತ ರಾಜಸ್ಥಾನದ ಚುರು ಜಿಲ್ಲೆಯ ಶಾಸಗಿ ಶಾಲೆಯಲ್ಲಿ 7 ತರಗತಿ ವ್ಯಾಸಂಗ ಮಾಡುತ್ತಿದ್ದ. ತಮ್ಮ ಮನೆಗೆಲಸವನ್ನು ಪೂರ್ಣಗೊಳಿಸಿಲ್ಲ ಎಂದು ಶಿಕ್ಷಕ ಆತನನ್ನು ಥಳಿಸಿದ್ದಾರೆ ಎಂದು ಸಲಸಾರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಸಂದೀಪ್ ವಿಷ್ಣೋವ್ ತಿಳಿಸಿದ್ದಾರೆ.
ಬಾಲಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಆತನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದರು ಎಂದು ಠಾಣಾಧಿಕಾರಿ ಹೇಳಿದ್ದಾರೆ.
ಘಟನೆಯ ಕುರಿತು ಶಿಕ್ಷನ ಸಚಿವ ಗೋವಿಂದ ಸಿಂಗ್ ದೋಟಸ್ರಾ ಅವರು ಬೇಸರ ವ್ಯಕ್ತಪಡಿಸಿದ್ದು, ಶಾಲೆಯ ಮಾನ್ಯತೆ ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಆರೋಪಿ ಶಿಕ್ಷಕ ಮನೋಜ್ (35) ವಿರುದ್ಧ ಪ್ರಕರಣ ದಾಖಲಿಸಿ, ಆತನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಕರಣದ ಸಂಬಂಧ ಪೊಲೀಸರು ತನಿಖೆ ಪ್ರಾರಂಭಿಸಿದ್ದು, ತನಿಖೆ ಮುಗಿಯುವ ತನಕ ಶಾಲೆಯ ಮಾನ್ಯತೆ ಸ್ಥಗಿತಗೊಳಿಸುವಂತೆ ಅಧಿಕಾರಿಗಳಗೆ ನಿರ್ದೇಶನ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಟ್ವೀಟ್ ಮೂಲಕ ತಿಳಿಸಿದ್ದಾರೆ.