ಸಿಂದಗಿ , ಅ. 21 (DaijiworldNews/SM): ರಾಜ್ಯ ರಾಜಕಾರಣದಲ್ಲಿ ಉಪಚುನಾವಣೆಗೆ ಇನ್ನಿಲ್ಲದ ಕಸರತ್ತುಗಳು ನಡೆಯುತ್ತಿದ್ದು, ಆಡಳಿತ ಪ್ರತಿ ಪಕ್ಷಗಳ ನಡುವೆ ವಾಗ್ವಾದ ಹೆಚ್ಚಾಗಿದೆ. ಈ ನಡುವೆ ಆರ್ ಎಸ್ ಎಸ್ ಸಂಘಟನೆಯನ್ನು ಪ್ರಶ್ನಿಸುವ ನೈತಿಕತೆ ಹೆಚ್.ಡಿ. ಕುಮಾರಸ್ವಾಮಿಗಿಲ್ಲ ಎಂದು ಮಾಜಿ ಸಿಎಂ ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಎಡಿಯೂರಪ್ಪ ಹೇಳಿದ್ದಾರೆ.
ಸಿಂದಗಿಯಲ್ಲಿ ಮಾತನಾಡಿರುವ ಬಿಎಸ್ ವೈ, ಆರ್ ಎಸ್ ಎಸ್ ವಿರುದ್ಧ ಮಾತನಾಡುವ ಹಕ್ಕು ಕುಮಾರಸ್ವಾಮಿಗಿಲ್ಲ. ಅವರು ಈ ರೀತಿ ಮಾತನಾಡಬಾರದು. ಆರ್ ಎಸ್ ಎಸ್ ವಿರುದ್ಧ ಮಾತನಾಡಿ ಅವರು ತಮ್ಮ ಗೌರವವನ್ನು ಕಡಿಮೆ ಮಾಡಿಕೊಳ್ಳುತ್ತಿರಿ. ಆದರೆ, ಯಾವುದೇ ಕಾರಣಕ್ಕೂ ಆರ್ ಎಸ್ ಎಸ್ ಮೇಲೆ ಜನರಿಗೆ ಇರುವ ಗೌರವ ಕಡಿಮೆಯಾಗದು ಎಂದಿದ್ದಾರೆ. ಅಲ್ಲದೆ, ಆರ್ ಎಸ್ ಎಸ್ ಟೀಕಿಸುವ ಅಗತ್ಯ ಅವರಿಗಿಲ್ಲ ಎಂದಿದ್ದಾರೆ.
ಈ ದೇಶದ ರಾಷ್ಟ್ರಪತಿಗಳು, ಪ್ರಧಾನಿಗಳು ಅಲ್ಲರೆ, ದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ೨೬ ರಾಜ್ಯದ ನಾಯಕರು ಕೂಡ ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಬಂದವರು ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಇನ್ನು ಯಾರೂ ಕೂಡ ಇನ್ನೊಬ್ಬರ ಬಗ್ಗೆ ಹಗುರವಾಗಿ ಮಾತನಾಡಬಾರದು. ಲಂಗು ಲಗಾಮಿಲ್ಲದೆ ನುಡಿಯುವುದು ಸರಿಯಲ್ಲ ಎಂದಿದ್ದಾರೆ.