ನವದೆಹಲಿ, ಅ. 21 (DaijiworldNews/SM): ಅತ್ಯಂತ ಅಲ್ಪ ಅವಧಿಯಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಪೂರೈಕೆ ಮಾಡುವ ಮೂಲಕ ಭಾರತ ವಿಶ್ವ ದರ್ಜೆಯಲ್ಲಿ ಗಮನ ಸೆಳೆದಿದೆ. ವ್ಯಾಕ್ಸಿನೇಷನ್ ಡ್ರೈನ್ ಆರಂಭಗೊಂಡ ಬಳಿಕ ಇಲ್ಲಿಯ ತನಕ ಸುಮಾರು ನೂರು ಕೋಟಿಗೂ ಅಧಿಕ ಮಂಡಿಗೆ ದೇಶದಲ್ಲಿ ಲಸಿಕೆ ವಿತರಿಸಲಾಗಿದೆ. ನೂರು ಕೋಟಿ ಲಸಿಕೆ ವಿತರಣಾ ದಾಖಲೆಯನ್ನು ಇಂದು ಭಾರತ ದಾಖಲಿಸಿದೆ.
ಗುರುವಾರದಂದು 100 ಕೋಟಿ ಗೂ ಅಧಿಕ ಡೋಸ್ ಲಸಿಕೆ ನೀಡುವ ಮೂಲಕ ಮಹತ್ವದ ಮೈಲುಗಲ್ಲಿನ ಸಾಧನೆಯನ್ನು ಭಾರತ ಮಾಡಿದೆ. ಇನ್ನು ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಟ್ವೀಟ್ ಮಾಡಿದ್ದಾರೆ. ಹಾಗೂ ಲಸಿಕಾ ಅಭಿಯಾನದಲ್ಲಿ ಕೈಜೋಡಿಸಿದ ಪ್ರತಿಯೊಬ್ಬರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ಮೂಲಗಳ ಮಾಹಿತ್ಯ ಪ್ರಕಾರ ದೇಶದ ಶೇಕಡ 75 ರಷ್ಟು ವಯಸ್ಕರು ಮೊದಲ ಡೋಸ್ ಪಡೆದಿದ್ದರೆ, ಶೇಕಡ 35 ರಷ್ಟು ಮಂದಿ ಎರಡು ಡೋಸ್ ಲಸಿಕೆ ಪಡೆದಿದ್ದಾರೆ.
85 ದಿನಗಳಲ್ಲಿ 10 ಕೋಟಿ ಡೋಸ್ ಲಸಿಕೆ ನೀಡಿದ್ದ ದೇಶದಲ್ಲಿ 45 ದಿನಗಳಲ್ಲಿ 20 ಕೋಟಿ ಗೂ ಅಧಿಕ ಮತ್ತು 29 ದಿನಗಳಲ್ಲಿ 30 ಕೋಟಿ ಗೂ ಅಧಿಕ ಡೋಸ್ ಲಸಿಕೆ ನೀಡಲಾಗಿತ್ತು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 24 ದಿನಗಳಲ್ಲಿ 30 ರಿಂದ 40 ಕೋಟಿ, ತದನಂತರದ 20 ದಿನಗಳಲ್ಲಿ ಆಗಸ್ಟ್ 6 ರಂದು 50 ಕೋಟಿ ಡೋಸ್ ಲಸಿಕೆ ನೀಡಿಕೆಯ ಸಾಧನೆ ಮಾಡಲಾಗಿತ್ತು ಎಂದು ತಿಳಿಸಿದೆ. ಬಳಿಕ ತದನಂತರ 76 ದಿನಗಳಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.