ಬೆಂಗಳೂರು, ಅ.21 (DaijiworldNews/HR): ಸಿಂಧಗಿ ಹಾಗೂ ಹಾನಗಲ್ ಉಪ ಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆಯನ್ನೇ ಹರಿಸುತ್ತಿದ್ದು, ಪ್ರತಿ ವೋಟ್ಗೆ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ 2 ಸಾವಿರ ಹಂಚಿಕೆ ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಆರೋಪಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಹಣಬಲದ ಮೇಲೆ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಇವರಿಗೆ ಜನರ ಕಷ್ಟ, ಸಮಸ್ಯೆಗಳನ್ನು ಬಗೆ ಹರಿಸೋದು ಬೇಕಿಲ್ಲ. ಅಭಿವೃದ್ಧಿ ಕೆಲಸಗಳಿಗಾಗಿ ಅಧಿಕಾರ ಮಾಡುತ್ತಿಲ್ಲ" ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಕರ್ನಾಟಕದಲ್ಲಿ ಎರಡು ವರ್ಷದಿಂದ ಆಡಳಿತ ನಡೆಸುತ್ತಿದ್ದರೂ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡಿದ್ದಾರಾ ಎಂದು ಪ್ರಶ್ನಿಸಿದ ಅವರು, ಉಪ ಚುನಾವಣೆಯಲ್ಲಿ ಹಣದ ಹೊಳೆ ಹರಿಸುತ್ತಿದ್ದು, 2 ಸಾವಿರ ಒಂದು ವೋಟ್ ಗಾಗಿ ಹಂಚಿಕೆ ಮಾಡುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ.