ಸಿಂದಗಿ, ಅ.21 (DaijiworldNews/HR): ಸಿಂಧಗಿ ಹಾಗೂ ಹಾನಗಲ್ ಉಪ ಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆಯನ್ನೇ ಹರಿಸುತ್ತಿದೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಕ್ಕೆ ತಿರುಗೇಟು ನೀಡಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಯಾರು ತಾನು ಕಳ್ಳ ಆತ ಬೇರೆಯವರನ್ನು ನಂಬಲ್ಲ. ಹಾಗೇ ವಿನಾಕಾರಣ ಬಿಜೆಪಿ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ" ಎಂದು ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ನಮ್ಮ ಪಕ್ಷದವರು ಹಣ ಹಂಚುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಯಾರು ಹಣ ಕೊಡುತ್ತಿದ್ದಾರೆ ? ಎಲ್ಲಿ ಹಂಚುತ್ತಿದ್ದಾರೆ ಎಂಬುದನ್ನು ಸಾಬೀತು ಮಾಡಲಿ. ಸೋಲಿನ ಭೀತಿಯಿಂದ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ" ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು 26 ರಾಜ್ಯಗಳಲ್ಲಿ ಇಂದು ಬಿಜೆಪಿ ಅಧಿಕಾರಕ್ಕೆ ಬಂದಿದೆ. ಅಲ್ಲೆಲ್ಲ ಹಣ ಬಲದಿಂದಲೇ ಅಧಿಕಾರಕ್ಕೆ ಬಂದಿದ್ದೇವಾ ? ಅಥವಾ ಕಾಂಗ್ರೆಸ್ ಬಳಿ ಹಣವಿಲ್ಲವೇ ? ಇಲ್ಲಾ ನಿಮ್ಮ ಬಳಿ ಹಣ ಕಡಿಮೆ ಇದೆಯೇ ? ಎಂದು ಪ್ರಶ್ನಿಸಿದ್ದಾರೆ.