ಬೆಂಗಳೂರು, ಅ.21 (DaijiworldNews/HR): ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 365 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 8 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಕರ್ನಾಟಕ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 365 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,84,849 ಕ್ಕೆ ಏರಿಕೆಯಾಗಿದೆ.
ಗುರುವಾರ ರಾಜ್ಯದಲ್ಲಿ 8 ಜನರು ಸೋಂಕಿನಿಂದ ಸಾವನ್ನಪ್ಪಿದ್ದು, ಇದುವರೆಗೆ ಒಟ್ಟು 37,984 ಮಂದಿ ಮೃತಪಟ್ಟಿದ್ದು. 29,37,848 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 8988 ಸಕ್ರಿಯ ಪ್ರಕರಣಗಳು ಇವೆ.
ಇನ್ನು 443 ಜನ ಸೋಂಕಿತರು ಗುಣಮುಖರಾಗಿ ರಾಜ್ಯದ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 0.31 ರಷ್ಟಿದೆ.