ನವದೆಹಲಿ, ಅ.21 (DaijiworldNews/HR): ಉತ್ತರಖಾಂಡ್ನಲ್ಲಿ ಸುರಿದ ಮಳೆ ಹಾಗೂ ಭೂಕುಸಿತಕ್ಕೆ 64 ಮಂದಿ ಸಾವನ್ನಪ್ಪಿದ್ದು, 11 ಮಂದಿ ಕಾಣೆಯಾಗಿದ್ದಾರೆ. ರಾಜ್ಯದಲ್ಲಿ ಮೂರು ದಿನಗಳ ನಿರಂತರ ಮಳೆಯಿಂದಾಗಿ 7000 ಕೋಟಿ ರೂ. ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಮಿ ಹೇಳಿದ್ದಾರೆ.
ಅಮಿತ್ ಶಾ ಅವರೊಂದಿಗೆ ಉತ್ತರಾಖಂಡರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಗುರ್ಮಿತ್ ಸಿಂಗ್, ಮುಖ್ಯಮಂತ್ರಿ ಪುಷ್ಕರ್ ಧಮಿ, ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಸಚಿವ ಧನ್ ಸಿಂಗ್ ರಾವತ್ ಅವರು ಭೂಕುಸಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಕೈಗೊಂಡಿದ್ದಾರೆ.
ಈ ಕುರಿತು ಮಾತನಾಡಿದ ಶಾ, "ಹಾನಿಗೊಳಗಾದ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸುವ ಪ್ರಯತ್ನ ನಡೆದಿದ್ದು, ಹಾನಿಗೊಳಗಾದ ರಸ್ತೆಗಳು ಮತ್ತು ಸೇತುವೆಗಳ ಸಂಪರ್ಕವನ್ನು ಆದಷ್ಟು ಬೇಗ ಪುನಃಸ್ಥಾಪಿಸುವುದು ಮತ್ತು ಜನರನ್ನು ಸುರಕ್ಷಿತಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ" ಎಂದಿದ್ದಾರೆ.
ಇನ್ನು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದೊಂದಿಗೆ ಇದೆ. ಉತ್ತರಾಖಂಡದ ಪುನರ್ವಸತಿ ಪ್ರಯತ್ನಗಳಿಗೆ ಎಲ್ಲ ಬೆಂಬಲ ನೀಡಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ.