ಮುಂಬೈ, ಅ 22 (DaijiworldNews/MS): ಮುಂಬೈನಲ್ಲಿ ಮತ್ತೊಮ್ಮೆ ಭಾರೀ ಅಗ್ನಿ ದುರಂತ ಸಂಭವಿಸಿದೆ, ಮುಂಬೈನ ಕರೇ ರಸ್ತೆಯಲ್ಲಿರುವ ಪರೇಲ್ ಪ್ರದೇಶದಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.
ಅವಿಜ್ಞಾ ಪಾರ್ಕ್ ಅಪಾರ್ಟ್ಮೆಂಟ್ನ 19ನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ದಳದ ವಾಹನಗಳು ಆಗಮಿಸಿ, ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದು, ಬೆಂಕಿ ದುರಂತದಲ್ಲಿ ಎಷ್ಟು ಜನ ಸಿಲುಕಿದ್ದಾರೆ ಎಂಬುದರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.
60 ಅಂತಸ್ತಿನ ಕಟ್ಟಡದಲ್ಲಿ ಹಲವಾರು ಜನರು ಸಿಲುಕಿಕೊಂಡಿರುವ ಭೀತಿ ಎದುರಾಗಿದ್ದು, ಸದ್ಯದ ಮಾಹಿತಿ ಪ್ರಕಾರ ಓರ್ವ ಸಾವನ್ನಪ್ಪಿರುವ ವರದಿಯಾಗಿದೆ. ಅಗ್ನಿ ಶಾಮಕ ದಳದ ಕ್ಕೂ ಹೆಚ್ಚು ತಂಡಗಳು ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದೆ.