ಬೆಂಗಳೂರು, ಅ.22 (DaijiworldNews/HR): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 378 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 11 ಮಂದಿ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, "ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 378 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ರಾಜ್ಯದಲ್ಲಿ 8891 ಸಕ್ರಿಯ ಪ್ರಕರಣಗಳಿದ್ದು, ಇಂದು 11 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಇಂದು 464 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಪಾಸಿಟಿವಿಟಿ ದರ ಶೇ 0.36 ರಷ್ಟಿದೆ.
ಇನ್ನು ಬೆಂಗಳೂರಿನಲ್ಲಿ ಇಂದು 195 ಜನರಿಗೆ ಸೋಂಕು ತಗುಲಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ.