ಶಿವಮೊಗ್ಗ, ಅ.23 (DaijiworldNews/PY): "ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ವಿಫಲವಾಗಿವೆ" ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಜನರು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದಾರೆ. ಆದರೆ, ಉತ್ತಮ ಆಡಳಿತ ನೀಡಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರ ಅಲೆಯಿದೆ. ನಮ್ಮ ಸರ್ಕಾರದಲ್ಲಿ ಹಲವು ಯೋಜನೆಗಳನ್ನು ಕೊಟ್ಟಿದ್ದೆವು. ಆ ಯೋಜನೆಗಳನ್ನು ಜನರು ನೆನಪು ಮಾಡಿಕೊಳ್ಳುತ್ತಿದ್ದಾರೆ" ಎಂದಿದ್ದಾರೆ.