ಮುಂಬೈ, ಅ 24 (DaijiworldNews/MS): ಕ್ರೂಸ್ ಶಿಪ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ ಬಂಧಿತನಾಗಿರುವ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಸಚಿವ ಛಗನ್ ಭುಜಬಲ್ ಶನಿವಾರ ಬೀಡ್ ಜಿಲ್ಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಬಿಜೆಪಿಯನ್ನು ಲೇವಡಿ ಮಾಡಿದ್ದಾರೆ.
ಬಾಲಿವುಡ್ ನಟ ಶಾರುಖ್ ಖಾನ್ ಕೇಸರಿ ಪಕ್ಷ ಬಿಜೆಪಿ ಸೇರಿದರೆ 'ಡ್ರಗ್ಸ್ ಬದಲು ಅದು ಸಕ್ಕರೆ ಪುಡಿಯಾಗುತ್ತದೆ ಎಂದು ವ್ಯಂಗ್ಯವಾಡಿದ ಅಚರು ಗುಜರಾತ್ನ ಮುಂದ್ರಾ ಬಂ ದರಿನಲ್ಲಿ ಭಾರೀ ಪ್ರಮಾಣದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ, ಆದರೆ ಈ ಪ್ರಕರಣವನ್ನು ತನಿಖೆ ಮಾಡುವ ಬದಲು, ಕೇಂದ್ರೀಯ ಸಂಸ್ಥೆಯಾದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಶಾರುಖ್ ಖಾನ್ ಅವರನ್ನು ಬೇಟೆಯಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಮಹಾರಾಷ್ಟ್ರ ಸರ್ಕಾರವು ಒಬಿಸಿ ಕೋಟಾದಲ್ಲಿ ಸುಗ್ರೀವಾಜ್ಞೆಯನ್ನು ಜಾರಿಗೊಳಿಸಿದೆ, ಆದರೆ ಬಿಜೆಪಿ ಕಾರ್ಯಕಾರಿಯೊಬ್ಬರು ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ ಹಾಗದರೆ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವುದನ್ನು ಬಿಜೆಪಿ ವಿರೋಧಿಸುತ್ತಿದೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.
ಇನ್ನು ಪ್ರಕರಣದಲ್ಲಿ ಆರ್ಯನ್ ಖಾನ್ ಅವರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಬಂಧಿಸಿದ್ದು ಇವರ ಜಾಮೀನು ಅರ್ಜಿ ತಿರಸ್ಕೃತಗೊಂಡ ನಂತರ ಪ್ರಸ್ತುತ ಮುಂಬೈನ ಆರ್ಥರ್ ರಸ್ತೆ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.