ಬೆಂಗಳೂರು, ಅ 24 (DaijiworldNews/MS): ರಾಜ್ಯದಲ್ಲಿರುವ ಚರ್ಚ್ಗಳ ಸಮೀಕ್ಷೆ ನಡೆಸಲು ಸರಕಾರ ಜುಲೈ 7ರಂದು ಹೊರಡಿಸಿರುವ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಈ ವಿಚಾರವಾಗಿ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ (ಅ.25) ಈ ಅರ್ಜಿಯ ವಿಚಾರಣೆ ನಡೆಸಲಿದೆ.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ನೇತೃತ್ವದ ವಿಭಾಗೀಯ ಪೀಠದ ಮುಂದೆ ಅರ್ಜಿ ವಿಷಯ ಮಂಡಿಸಲಾಗಿದ್ದು ನ್ಯಾಯಾಲಯವು , ಅರ್ಜಿಯ ಜೊತೆ ಲಗತ್ತಿಸಿರುವ ಆದೇಶದ ಪ್ರತಿಯ ಅನುವಾದದ ಪ್ರತಿಗಳನ್ನು ಸಲ್ಲಿಸುವಂತೆ ಅರ್ಜಿದಾರ ವಕೀಲರಿಗೆ ನಿರ್ದೇಶನ ನೀಡಿ ಸೋಮವಾರ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಆದೇಶಿಸಿದೆ.
ಚರ್ಚ್ಗಳು ಇರುವ ಸ್ಥಳ, ತಾಲ್ಲೂಕು, ಜಿಲ್ಲೆ ಹಾಗೂ ಅವುಗಳ ವಿಧಾನಸಭಾ ಕೇತ್ರದ ವ್ಯಾಪ್ತಿಯ ದತ್ತಾಂಶಗಳು ಮತ್ತು ಚರ್ಚ್ಗಳ ಹೆಸರು, ವಿಳಾಸ, ಖಾತೆ ಸಂಖ್ಯೆ, ಸರ್ವೇ ಸಂಖ್ಯೆ ಹಾಗೂ ಪಾದ್ರಿಗಳ ವಿವರಗಳನ್ನು ಸಂಗ್ರಹಿಸಲು ಸರ್ಕಾರದ ಪತ್ರದಲ್ಲಿ ಸೂಚಿಸಲಾಗಿದೆ.ಈ ರೀತಿ ಮಾಹಿತಿ ಸಂಗ್ರಹಿಸಲು ಯಾವುದೇ ಕಾನೂನಿನಲ್ಲಿ ಅವಕಾಶವಿಲ್ಲ. ಇದಲ್ಲದೆ, ಯಾವ ಕಾರಣಕ್ಕಾಗಿ ಈ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ ಎಂಬುದನ್ನು ಹೇಳಲಾಗಿಲ್ಲ. ಅಲ್ಪಸಂಖ್ಯಾತರ ವರ್ಗಕ್ಕೆ ಬರುವ ಇತರ ಸಮುದಾಯಗಳನ್ನು ಬಿಟ್ಟು ಕೇವಲ ಚರ್ಚ್ಗಳ ಮಾಹಿತಿ ಸಂಗ್ರಹಿಸುತ್ತಿರುವುದೇಕೆ ಎಂದು ಸ್ಪಷ್ಟಪಡಿಸಿಲ್ಲವಿವಾದಾತ್ಮಕ ಆದೇಶವು ಜಾತ್ಯತೀತವಾದದ ಮೂಲ ರಚನೆಗೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.