ನವದೆಹಲಿ, ಅ.24 (DaijiworldNews/PY): ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ, "ಸಾರ್ವಜನಿಕರಿಗೆ ತೊಂದರೆ ಕೊಡುವ ವಿಚಾರದಲ್ಲಿ ಮೋದಿ ಸರ್ಕಾರ ದೊಡ್ಡ ದಾಖಲೆ ಮಾಡಿದೆ" ಎಂದು ಲೇವಡಿ ಮಾಡಿದ್ದಾರೆ.
ಈ ವರ್ಷ ಪೆಟ್ರೋಲ್ ಲೀಟರ್ಗೆ 23.53 ರೂ. ನಷ್ಟು ಹೆಚ್ಚಳವಾಗಿದೆ ಎನ್ನುವ ಮಾಧ್ಯಮದ ವರದಿಯೊಂದನ್ನು ಟ್ವೀಟ್ನಲ್ಲಿ ಟ್ಯಾಗ್ ಮಾಡಿದ್ದಾರೆ.
"ಸಾರ್ವಜನಿಕರಿಗೆ ತೊಂದರೆ ಕೊಡುವ ವಿಚಾರದಲ್ಲಿ ಮೋದಿ ಸರ್ಕಾರ ದೊಡ್ಡ ದಾಖಲೆ ಮಾಡಿದೆ. ಮೋದಿ ಸರ್ಕಾರದ ಅವಧಿಯಲ್ಲಿ ಅತ್ಯಧಿಕ ನಿರುದ್ಯೋಗ ಸೃಷ್ಟಿಯಾಗಿದೆ. ಮೋದಿ ಸರ್ಕಾರದಲ್ಲಿ ಸರ್ಕಾರಿ ಆಸ್ತಿ ಮಾರಾಟ ಮಾಡಲಾಗುತ್ತಿದೆ. ಮೋದಿ ಸರ್ಕಾರದಲ್ಲಿ ಒಂದು ವರ್ಷದಲ್ಲಿ ಅತಿ ಹೆಚ್ಚು ಪೆಟ್ರೋಲ್ ದರ ಏರಿಕೆ ಆಗಿದೆ" ಎಂದಿದ್ದಾರೆ.
ಇನ್ನು ಇದೇ ಮಾಧ್ಯಮದ ವರದಿಯನ್ನು ಟ್ಯಾಗ್ ಮಾಡಿರುವ ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ, "ಅಚ್ಚೇ ದಿನ್" ಎಂದು ಟೀಕಿಸಿದ್ದಾರೆ.