ದಾವಣಗೆರೆ, ಅ.24 (DaijiworldNews/PY): "ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆರೋಪಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಅವರು ಏನೇ ಆರೋಪ ಮಾಡಿದರೂ ಕೂಡಾ ಗೆಲ್ಲುವುದಿಲ್ಲ" ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿಂದಗಿ ಹಾಗೂ ಹಾನಗಲ್ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ದೊಡ್ಡ ಅಂತರದಲ್ಲಿ ಗೆಲ್ಲಲಿದೆ. ಉಪಚುನಾವಣೆಯಲ್ಲಿ ಬಿಜೆಪಿ ಪರ ಫಲಿತಾಂಶ ಬರುತ್ತದೆ" ಎಂದಿದ್ದಾರೆ.
"ಕ್ಷೇತ್ರದಲ್ಲೇ ಬಿಜೆಪಿಯ ಎಲ್ಲಾ ನಾಯಕರು ಟಿಕಾಣಿ ಹೂಡಿದ್ದಾರೆ. ಎರಡು ಕ್ಷೇತ್ರದಲ್ಲೂ ಕೂಡಾ ದೊಡ್ಡ ಸಭೆ ನಡೆಸಿದ್ದು, ಅಭ್ಯರ್ಥಿಗಳು ಗೆಲ್ಲುವ ಭರವಸೆ ಇದೆ" ಎಂದು ತಿಳಿಸಿದ್ದಾರೆ.
"ಹಾನಗಲ್ ಹಾಗೂ ಸಿಂದಗಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರ ಪ್ರಚಾರಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಸಿದ್ದರಾಮಯ್ಯ ಅವರು ಏನೇ ಮಾತನಾಡಿದರೂ ಕೂಡಾ ಏನೂ ಪ್ರಯೋಜನವಿಲ್ಲ. ಫಲಿತಾಂಶ ಬಂದ ಬಳಿಕ ಅವರಿಗೆ ತಿಳಿಯಲಿದೆ" ಎಂದಿದ್ದಾರೆ.