ಬೆಳಗಾವಿ, ಅ.25 (DaijiworldNews/HR): ರಾಜ್ಯಾದ್ಯಂತ 3,533 ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಭಾನುವಾರ ಲಿಖಿತ ಪರೀಕ್ಷೆ ನಡೆಸಲಾಗಿದ್ದು, ಬೆಳಗಾವಿಯಲ್ಲಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ 14 ಮಂದಿಯನ್ನು ಬಂಧಿಸಲಾಗಿದೆ.
ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಸಾಧನ ಬಳಸಿಕೊಂಡು ನಕಲು ಮಾಡುತ್ತಿದ್ದ ಇಬ್ಬರು ಪರೀಕ್ಷಾರ್ಥಿಗಳು ಮತ್ತು ಇದಕ್ಕಾಗಿ ಸಹಾಯ ಮಾಡಿದ 12 ಮಂದಿ ಸೇರಿದಂತೆ 14 ಮಂದಿಯನ್ನು ಕಾರ್ಯಾಚರಣೆ ನಡೆಸಿದ ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.
ಇನ್ನು ಗೋಕಾಕ್ ತಾಲೂಕಿನ ಮಸಗುಪ್ಪಿ ಲಕ್ಷ್ಮಣ, ಮೂಡಲಗಿ ತಾಲೂಕಿನ ತಿಗಡಿ ಗ್ರಾಮದ ಸರಸ್ವತಿ ಪೂಜಾರಿ ಬ್ಲೂಟೂತ್ ಸಾಧನದ ಮೂಲಕ ನಕಲು ಮಾಡುವಾಗ ಸಿಕ್ಕಿಬಿದ್ದಿದ್ದಾರೆ.
ಬಂಧಿತರಿಂದ 9 ಮಾಸ್ಟರ್ ಕಾರ್ಡ್, 19 ಬ್ಲೂಟೂತ್, 33 ಮೊಬೈಲ್, 1 ಲ್ಯಾಪ್ಟಾಪ್ ಹಾಗೂ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.