ಬೆಂಗಳೂರು, ಅ.25 (DaijiworldNews/HR): ಕರ್ನಾಟದಲ್ಲಿ 1ರಿಂದ 5ನೇ ತರಗತಿವರೆಗಿನ ಶಾಲೆಗಳು ಇಂದಿನಿಂದ ಆರಂಭವಾಗುತ್ತಿದ್ದು, ಮಕ್ಕಳಿರುವ ಮನೆಗಳಲ್ಲಿ ಶಾಲೆಗೆ ಹೊರಡುವ ಸಂಭ್ರಮ ಇಂದಿನಿಂದ ಮತ್ತೆ ಪ್ರಾರಂಭವಾಗಿದೆ.
ಸಾಂದರ್ಭಿಕ ಚಿತ್ರ
ಸರ್ಕಾರ ಆದೇಶದಂತೆ, ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಬೇಕು. ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರವೇ ಶಾಲೆಗಳು ತೆರೆಯಬೇಕು. ಇನ್ನುಳಿದ ಎರಡು ದಿನ ಶಾಲೆ ಕೊಠಡಿಗಳ ಸ್ವಚ್ಛತಾ ಕಾರ್ಯ, ಸ್ಯಾನಿಟೈಸರ್ಗೆ ಅವಕಾಶ ನೀಡಬೇಕು.
ಇನ್ನು ಮಕ್ಕಳಿಗೆ ಒಂದು ದಿನ ತರಗತಿ ಒಂದು ದಿನ ರಜೆ ನೀಡಲಾಗಿದ್ದು, ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾಗಿ ಬೇಕು. ಅನುಮತಿ ಪತ್ರದಲ್ಲಿ ವಿದ್ಯಾರ್ಥಿಯ ಕೊರೊನಾ ಸೋಂಕು ಇಲ್ಲ ಎಂದು ಪೋಷಕರು ದೃಢೀಕರಿಸಬೇಕು. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು.
ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ. ಆನ್ ಲೈನ್ ಮತ್ತು ಆಫ್ ಲೈನ್ ಎರಡೂ ತರಗತಿಗೂ ಅವಕಾಶ ನೀಡಲಾಗಿದ್ದು, ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ತರಗತಿಗಳು ನಡೆಯಲಿದ್ದು, ನವೆಂಬರ್ ಎರಡರಿಂದ ಶನಿವಾರ ಬೆಳಗ್ಗೆ 8 ರಿಂದ 11.40 ರ ವರೆಗೆ ಮಾತ್ರ ತರಗತಿ ನಡೆಯುತ್ತದೆ ಎಂದು ಸರ್ಕಾರ ತಿಳಿಸಿದೆ.