ಮುಂಬೈ, ಅ 26 (DaijiworldNews/MS): ಐಷಾರಾಮಿ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾಗಿ ಬಂಧಿತರಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರ ಜಾಮೀನಿಗೆ ವಿರೋಧ ವ್ಯಕ್ತಪಡಿಸಿರುವ ಎನ್ ಸಿಬಿ, ಆರ್ಯನ್ ಖಾನ್ ಕೇವಲ ಡ್ರಗ್ಸ್ ಸೇವಿಸುವುದರ ಜೊತೆಗೆ ಡ್ರಗ್ಸ್ ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಿದೆ.
ಎನ್ ಸಿಬಿಯೂ ಶಾರುಖ್ ಖಾನ್ ಅವರ ಮ್ಯಾನೇಜರ್ ಆಗಿರುವ ಪೂಜಾ ದದ್ಲಾನಿ ಎಂಬ ಮಹಿಳೆ ತನಿಖೆಯ ದಾರಿತಪ್ಪಿಸುವ ಪ್ರಯತ್ನದಲ್ಲಿ ಪ್ರಕರಣದ ಸಾಕ್ಷಿ ಮತ್ತು ಸಾಕ್ಷ್ಯಗಳನ್ನು ತಿರುಚುತ್ತಿದ್ದಾರೆ ಎಂದು ಬಾಂಬೆ ಹೈಕೋರ್ಟ್ ಗೆ ತಿಳಿಸಿದೆ.
ಈ ಅರ್ಜಿದಾರರೊಂದಿಗೆ ಸಂಪರ್ಕ ಹೊಂದಿದ ಪೂಜಾ ದದ್ಲಾನಿ ಅವರು ತನಿಖೆ ನಡೆಯುತ್ತಿರುವಾಗ ಅಂತಹ ಪಂಚ್ ಸಾಕ್ಷಿಗಳ ಮೇಲೆ ಪ್ರಭಾವ ಬೀರುವಂತೆ ತೋರುತ್ತಿದೆ. ತನಿಖೆಯ ಹಂತದಲ್ಲಿ ಅಂತಹ ಹಸ್ತಕ್ಷೇಪವು ದುರುದ್ದೇಶಪೂರಿತವಾಗಿದೆ. ಅದೇ ರೀತಿ ಸತ್ಯದ ಅನ್ವೇಷಣೆಗೆ ಅಡ್ಡಿಯಾಗುತ್ತದೆ ಎಂದು ಎಂದು ಎನ್ಸಿಬಿ ಬಾಂಬೆ ಹೈಕೋರ್ಟ್ಗೆ ತಿಳಿಸಿದೆ.
ನ್ಯಾಯಮೂರ್ತಿ ಎನ್ ಡಬ್ಲ್ಯು ಸಾಂಬ್ರೆ ಅವರ ಏಕ ಸದಸ್ಯ ಪೀಠ ಆರ್ಯನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ ನಡೆಸಲಿದೆ.