ನವದೆಹಲಿ, ಅ.28 (DaijiworldNews/HR): ದೇಶದಲ್ಲಿ ಮತ್ತೆ ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡುಬರುತ್ತಿದ್ದು, ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 16,156 ಮಂದಿಗೆ ಸೋಂಕು ದೃಢಪಟ್ಟಿದ್ದು, 733 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ 16,156 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಕೊರೊನಾ ಪ್ರಕರಣಗಳ ಸಂಖ್ಯೆ 34,231,809ಕ್ಕೆ ಏರಿಕೆಯಾಗಿದೆ.
ಇನ್ನು 17,000 ಕ್ಕೂ ಹೆಚ್ಚು ರೋಗಿಗಳು ಚೇತರಿಸಿಕೊಂಡಿದ್ದು, ಕಳೆದ 24 ಗಂಟೆಗಳಲ್ಲಿ 733 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು ಚೇತರಿಕೆ ಮತ್ತು ಸಾವಿನ ಸಂಖ್ಯೆ ಕ್ರಮವಾಗಿ 33,614,434 ಮತ್ತು 456,386 ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳು 160,989 ಆಗಿದೆ.
ನಿನ್ನೆ ದೇಶದಲ್ಲಿ 12,90,900 ಜನರಿಗೆ ಕೊರೊನಾ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 49,09,254 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,04,04,99,873 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.