ನವದೆಹಲಿ, ಅ.28 (DaijiworldNews/HR): ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಥಾತ್ರಿಯಿಂದ ದೋಡಾಗೆ ತೆರಳುತ್ತಿದ್ದ ಮಿನಿ ಬಸ್ ಕಮರಿಗೆ ಬಿದ್ದು ಎಂಟು ಮಂದಿ ಸಾವನ್ನಪ್ಪಿದ್ದು, ಅನೇಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಕುರಿತು ದೋಡಾದ ಹೆಚ್ಚುವರಿ ಎಸ್ಪಿ ಮಾಹಿತಿ ನೀಡಿದ್ದು, ಜಮ್ಮು ಮತ್ತು ಕಾಶ್ಮೀರದ ದೋಡಾದ ಥಾತ್ರಿ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 8 ಜನರು ಸಾವನ್ನಪ್ಪಿದ್ದು, ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು, ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಘಟನೆ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ, "ದೊಡಾ ವಿಕಾಸ್ ಶರ್ಮಾ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಅಗತ್ಯವಿರುವ ಹೆಚ್ಚಿನ ಸಹಾಯವನ್ನು ಒದಗಿಸಲಾಗುವುದು" ಎಂದು ತಿಳಿಸಿದ್ದಾರೆ.