ಬೆಂಗಳೂರು, ಅ.28 (DaijiworldNews/PY): ಯಾವ ಯೋಜನೆಯಲ್ಲೂ ಪ್ರಗತಿ ಇಲ್ಲ. ಇದನ್ನು 'ಡಕೋಟಾ ಸರ್ಕಾರ' ಎನ್ನದೆ ಇನ್ನೇನು ಹೇಳಬೇಕು!? ಎಂದು ಕಾಂಗ್ರೆಸ್ ಕೇಳಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಆಂತರಿಕ ಕಿತ್ತಾಟ, ಖಾತೆ ರಂಪಾಟ, ನಾಯಕತ್ವ ಬದಲಾವಣೆ, ಉಪಚುನಾವಣೆಗಳಲ್ಲಿ ಕಾಲ ಕಳೆದ ಬಿಜೆಪಿ ಸರ್ಕಾರ ಅಭಿವೃದ್ಧಿ ವಿಷಯದಲ್ಲಿ 'ಶೂನ್ಯ ಸಂಪಾದನೆ' ಮಾಡಿದೆ. ವಸತಿ, ಆರೋಗ್ಯ ಸೇರಿದಂತೆ ಹಲವು ಇಲಾಖೆಗಳಲ್ಲಿ ₹21,331 ಕೋಟಿ ಅನುದಾನ ಬಳಕೆಯಾಗಲಿಲ್ಲ, ಯಾವ ಯೋಜನೆಯಲ್ಲೂ ಪ್ರಗತಿ ಇಲ್ಲ. ಇದನ್ನು 'ಡಕೋಟಾ ಸರ್ಕಾರ' ಎನ್ನದೆ ಇನ್ನೇನು ಹೇಳಬೇಕು!? ಎಂದ ಪ್ರಶ್ನಿಸಿದೆ.
"ಪೆಟ್ರೋಲ್-ಡೀಸೆಲ್, ಎಲ್ಪಿಜಿ ನಿರಂತರ ಬೆಲೆ ಏರಿಕೆ ಪರಿಣಾಮ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಈ ಬೆಲೆ ಏರಿಕೆಯ ಪ್ರಹಾರ ಜನರನ್ನ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸುತ್ತಿದೆ" ಎಂದಿದೆ.
"ಕೇಂದ್ರ-ರಾಜ್ಯ ಬಿಜೆಪಿ ಸರ್ಕಾರಗಳಿಗೆ ಕನಿಷ್ಟ ಬದ್ಧತೆ ಇದ್ದರೆ ಇಂಧನ ತೈಲಗಳ ಮೇಲಿನ ತೆರಿಗೆ ಕಡಿತ ಗೊಳಿಸಿ, ಬೆಲೆಯೇರಿಕೆಗೆ ಕಡಿವಾಣ ಹಾಕಲಿ" ಎಂದು ಹೇಳಿದೆ.