ಪಣಜಿ, ಅ.28 (DaijiworldNews/HR): ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಚಿತ್ರಗಳಿದ್ದ ಅನೇಕ ಫಲಕಗಳನ್ನು ಗೋವಾದಲ್ಲಿ ವಿರೂಪಗೊಳಿಸಲಾಗಿದ್ದು, ಇದು ಬಿಜೆಪಿಯ ಅಸಹಿಷ್ಣುತೆಯನ್ನು ಬಿಂಬಿಸುತ್ತದೆ ಎಂದು ಗೋವಾ ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.
ಮಮತಾ ಬ್ಯಾನರ್ಜಿಯವರು ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರನ್ನು ತುಳಿಯಲು ಪ್ರಯತ್ನಿಸುತ್ತಿರುವ ಕಾರ್ಟೂನನ್ನು ತೃಣಮೂಲ ಕಾಂಗ್ರೆಸ್ನ ಗೋವಾ ಘಟಕವು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದೆ ಎಂದು ಬಿಜೆಪಿ ಆರೋಪಿಸಿತ್ತು.
ಇನ್ನು ಈ ಕುರಿತ ಟ್ವೀಟ್ ನ ಸ್ಕ್ರೀನ್ ಶಾಟ್ ವೈರಲ್ ಆಗುತ್ತಿದ್ದಂತೆಯೇ ಮಮತಾ ಬ್ಯಾನರ್ಜಿಯವರ ಚಿತ್ರಗಳಿದ್ದ ಹಲವು ಫಲಕಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಟಿಎಂಸಿ ಆರೋಪಿಸಿದೆ.