ನವದೆಹಲಿ, ಅ 29 (DaijiworldNews/MS): ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ)ನ ಹಾಲಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಡಿಸೆಂಬರ್ 10 ರ ನಂತರದ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಅದೇ ಸ್ಥಾನಕ್ಕೆ ಮರು ನೇಮಕ ಮಾಡಲಾಗಿದೆ.
ಕೇಂದ್ರ ಸಂಪುಟದ ನೇಮಕಾತಿ ಸಮಿತಿ ಗುರುವಾರ ತಡರಾತ್ರಿ ಮರು ನೇಮಕಾತಿ ನಿರ್ಧಾರಕ್ಕೆ ಅನುಮೋದನೆ ನೀಡಿದೆ. ಶಕ್ತಿಕಾಂತ ದಾಸ್ ಅವರು ಡಿಸೆಂಬರ್ 12, 2018 ರಂದು ಭಾರತೀಯ ರಿಸರ್ವ್ ಬ್ಯಾಂಕ್ನ 25 ನೇ ಗವರ್ನರ್ ಆಗಿ ಶಕ್ತಿಕಾಂತ ದಾಸ್ ಅಧಿಕಾರ ವಹಿಸಿಕೊಂಡಿದ್ದರು ಮರು-ನೇಮಕಾತಿ ಡಿಸೆಂಬರ್ 10, 2021 ರಿಂದ ಅಥವಾ ಮುಂದಿನ ಆದೇಶದವರೆಗೆ, ಯಾವುದು ಮೊದಲೋ ಅದು ಜಾರಿಯಲ್ಲಿರುತ್ತದೆ.
ಕ್ತಿಕಾಂತ ದಾಸ್ ಅವರು ತಮ್ಮ 38 ವರ್ಷಗಳ ವೃತ್ತಿಜೀವನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಹಣಕಾಸು, ತೆರಿಗೆ, ಕೈಗಾರಿಕೆಗಳು, ಮೂಲಸೌಕರ್ಯ ಇತ್ಯಾದಿ ಕ್ಷೇತ್ರಗಳಲ್ಲಿ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಶಕ್ತಿಕಾಂತ ದಾಸ್ ಅವರು ವಿಶ್ವ ಬ್ಯಾಂಕ್, ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ (ಎಡಿಬಿ), ನ್ಯೂ ಡೆವಲಪ್ಮೆಂಟ್ ಬ್ಯಾಂಕ್ (ಎನ್ಡಿಬಿ), ಮತ್ತು ಏಷ್ಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್ಮೆಂಟ್ ಬ್ಯಾಂಕ್ (ಎಐಐಬಿ) ಗಳಲ್ಲಿ ಭಾರತದ ಪರ್ಯಾಯ ಗವರ್ನರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.