ನವದೆಹಲಿ, ಅ.29 (DaijiworldNews/HR): ಭಾರತದಲ್ಲಿ ಕೊರೊನಾ ಸಾವಿನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 805 ಮಂದಿ ಸೋಂಕಿಗೆ ಮೃತಪಟ್ಟಿದ್ದು, ಈ ವರೆಗೆ ಒಟ್ಟು 4,57,191 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,348 ಕೊರೊನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 3,42,46,157ಕ್ಕೆ ಏರಿದೆ.
ಕಳೆದ 24 ಗಂಟೆಗಳಲ್ಲಿ 13,198 ಮಂದಿ ಗುಣಮುಖರಾಗಿದ್ದು, ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,36,27,632ಕ್ಕೆ ತಲುಪಿದ್ದು, ಸದ್ಯ 1,61,334 ಸಕ್ರಿಯ ಪ್ರಕರಣಗಳಿವೆ.
ಇನ್ನು ಒಟ್ಟು 60,44,98,405 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಒಟ್ಟು 1,04,82,00,966 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.