ದಾವಣಗೆರೆ, ಅ.29 (DaijiworldNews/HR): ಶಿಕ್ಷಕರ ನೇಮಕಾತಿ ಮಾಡಿದ್ದು ಮಕ್ಕಳಿಗೆ ಪಾಠ ಮಾಡಲಿಕ್ಕೆ ಹೊರೆತು ಸಂಸಾರ ನೋಡಿಕೊಳ್ಳೋಕೆ ಅಲ್ಲ ಎಂದು ಶಿಕ್ಷಕರ ವರ್ಗಾವಣೆ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿಕ್ಷಕರ ವರ್ಗಾವಣೆಗೆ ಸರ್ಕಾರ ಕೈಗೊಂಡಿರುವ ಕ್ರಮದಿಂದ ಶಿಕ್ಷಕರು ಪರದಾಡುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, "ಕಳೆದ ಮೂರು ವರ್ಷದಿಂದ ವರ್ಗಾವಣೆ ಪ್ರಕ್ರಿಯೆ ನಿಲ್ಲಿಸಲಾಗಿತ್ತು. ಕೆಲ ಶಿಕ್ಷಕರ ವೈಯುಕ್ತಿಕ ಸಮಸ್ಯೆಗಳನ್ನ ಸಾಮೂಹಿಕ ಎಂದು ಬಿಂಬಿಸಲಾಗದು, ಕೆಲ ಶಿಕ್ಷಕರಿಗೆ ಕೆಲಸಕ್ಕೆ ಸೇರುವಾಗಿ ಜಿಲ್ಲಾವಾರು ಆಯ್ಕೆ ಅಂತ ಗೊತ್ತಿರಲಿಲ್ಲವೇ? ನಾವು ಶಿಕ್ಷಕರನ್ನು ನೇಮಕ ಮಾಡಿರುವುದು ಪಾಠ ಮಾಡಲಿಕ್ಕೆ, ಸಂಸಾರ ನೋಡಿಕೊಳ್ಳುವುದಕ್ಕಲ್ಲ" ಎಂದರು.
ಇನ್ನು ನಮಗೆ ಎಲ್ಲರ ಸಮಸ್ಯೆನೂ ಅರ್ಥ ಆಗುತ್ತೆ, ಆದರೆ ಶಿಕ್ಷಕರ ಸಮಸ್ಯೆಗಿಂತ ಮೊದಲು ಮಕ್ಕಳ ಸಮಸ್ಯೆ ಬಗೆಹರಿಸಬೇಕಿದೆ. ಬಳಿಕ ಜಿಲ್ಲಾವಾರು ಶಿಕ್ಷಕರ ಸಮಸ್ಯೆ ಬಗೆಹರಿಸುತ್ತೇವೆ ಎಂದಿದ್ದಾರೆ.
ಶಿಕ್ಷಣ ವ್ಯವಸ್ಥೆಗೆ ಕೊರೊನಾ ಸವಾಲಾಗಿದ್ದು, ಕೇಂದ್ರ, ರಾಜ್ಯ ಸರ್ಕಾರ ಹೆಚ್ಚಿನ ನಿಗಾ ವಹಿಸುತ್ತಿದೆ" ಎಂದು ಹೇಳಿದ್ದಾರೆ.