ಗಾಜಿಯಾಬಾದ್, ಅ.29 (DaijiworldNews/PY): ದೆಹಲಿ-ಉತ್ತರ ಪ್ರದೇಶ ಗಡಿಭಾಗ ಗಾಜಿಪುರದಲ್ಲಿ ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ ಹಾಕಲಾಗಿದ್ದ ಬ್ಯಾರಿಕೇಡ್ ಹಾಗೂ ಮುಳ್ಳು ತಂತಿಗಳನ್ನು ಶುಕ್ರವಾರ ಪೊಲೀಸರು ತೆರವುಗೊಳಿಸಲು ಆರಂಭಿಸಿದ್ದಾರೆ.
ಟೆಕ್ರಿ ಸೇರಿದಂತೆ ಸಿಂಘು, ಗಾಜಿಪುರದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳವನ್ನು ಹೊರತುಪಡಿಸಿ ರಸ್ತೆಗಳಲ್ಲಿ ಹಾಕಿರುವ ಬ್ಯಾರಿಕೇಡ್ಗಳನ್ನು ತೆರೆದು, ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಅ.21ರಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು. ಈ ಹಿನ್ನೆಲೆ ಪೊಲೀಸರು ಬ್ಯಾರಿಕೇಡ್ಗಳನ್ನು ತೆಗೆಯಲು ಮುಂದಾಗಿದ್ದಾರೆ.
ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ದ ಭಾರತೀಯ ಕಿಸಾನ್ ಒಕ್ಕೂಟದ ನೇತೃತ್ವದಲ್ಲಿ 2020ರ ನವೆಂಬರ್ನಿಂದೆ ಇದೇ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ರೈತರ ಪ್ರತಿಭಟನೆಯ ಸಂದರ್ಭ ಹಿಂಸಾಚಾರ ನಡೆದ ಬಳಿಕ ರೈತರು ಪ್ರತಿಭಟನೆ ನಡೆಸುತ್ತಿದ್ದ ದೆಹಲಿಯ ಗಡಿ ಭಾಗಗಳ ಹೆದ್ದಾರಿಗಳಲ್ಲಿ ಕಬ್ಬಿಣ ಹಾಗೂ ಸಿಮೆಂಟ್ಗಳ ಬ್ಯಾರಿಕೇಡ್ ಹಾಕಲಾಗಿದ್ದು, ಸುರುಳಿಯಾಕಾರದ ಮುಳ್ಳುತಂತಿಗಳನ್ನು ಜೋಡಿಸಲಾಗಿತ್ತು.