ನೋಯ್ಡಾ, ಅ.29 (DaijiworldNews/HR): ಮೆರವಣಿಗೆ ಸಂದರ್ಭದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಮೂವರನ್ನು ನೋಯ್ಡಾದಲ್ಲಿ ಬಂಧಿಸಲಾಗಿದ್ದು, ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಸಾಂದರ್ಭಿಕ ಚಿತ್ರ
ಬಂಧಿತ ಆರೋಪಿಗಳನ್ನು ಮೊಹಮ್ಮದ್ ಜಾಫರ್, ಸಮೀರ್ ಅಲಿ ಮತ್ತು ಅಲಿ ರಾಜಾ ಎಂದು ಗುರುತಿಸಲಾಗಿದೆ.
ಅಕ್ಟೋಬರ್ 20ರಂದು ನಡೆದ ಮೆರವಣಿಗೆಯಲ್ಲಿ ಈ ಆರೋಪಿಗಳು ಕೂಗಿದ ಘೋಷಣೆಗಳ ವಿಡಿಯೊ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದ್ದು, ಇದನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಇನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗುವವರ ವಿರುದ್ಧ ದೇಶದ್ರೋಹದ ಕಾನೂನಿನಡಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.