ಬೆಂಗಳೂರು, ಅ.29 (DaijiworldNews/HR): ಸ್ಯಾಂಡಲ್ವುಡ್ ನಟ ಪುನೀತ್ ರಾಜ್ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಇಂದು ನಟ ಪುನೀತ್ ರಾಜ್ ಕುಮಾರ್ ಅವರು ಜಿಮ್ ನಲ್ಲಿ ಕಸರತ್ತು ನಡೆಸುತ್ತಿದ್ದಂತ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ರಂ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿದ್ದು, ಆಸ್ಪತ್ರೆಯ ವೈದ್ಯರಿಂದ ನಟ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿಯ ಮಾಹಿತಿ ಪಡೆಯುತ್ತಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮುಖ್ಯಮಂತ್ರಿಗಳೇ ಅವರೇ ಮಾಹಿತಿ ನೀಡಲಿದ್ದಾರೆ ಎನ್ನಲಾಗುತ್ತಿದೆ.