ಬೆಂಗಳೂರು,ಅ 29 (DaijiworldNews/MS): ಸ್ಯಾಂಡಲ್ವುಡ್ ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರ ಚೇತರಿಕೆಗಾಗಿ ಎಲ್ಲಾ ರೀತಿಯ ಚಿಕಿತ್ಸೆ ಮುಂದುವರಿಸಲಾಗಿದೆ. ಆದರೆ ಅವರ ಸ್ಥಿತಿ ಬಿಗಡಾಯಿಸಿದೆ ಎಂದು ವಿಕ್ರಂ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
"ಬೆಳಿಗ್ಗೆ 11.30ಕ್ಕೆ ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಖಾಸಗಿ ಕ್ಲಿನಿಕ್ ಒಂದರಲ್ಲಿ ಇಸಿಜಿ ಮಾಡಿಸಿಕೊಂಡು ಇಲ್ಲಿಗೆ ಬಂದಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ. ಅವರಿಗೆ ಎಲ್ಲಾ ಚಿಕಿತ್ಸೆಯನ್ನು ಆರಂಭಿಸಲಾಗಿದೆ. ಅರ್ಧಗಂಟೆಯಿಂದ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೇ ಇನ್ನೂ ಏನೂ ಹೇಳೋದಕ್ಕೆ ಆಗೋದಿಲ್ಲ. ತುಂಬಾ ಸೀರಿಯಸ್ ಆಗಿದ್ದು ಇನ್ನು ಅರ್ಧ ಗಂಟೆಯಲ್ಲಿ ಆಸ್ಪತ್ರೆಯ ವೈದ್ಯರು ಸಂಪೂರ್ಣ ಮಾಹಿತಿ ನೀಡಲಿದ್ದಾರೆ " ಮಾಧ್ಯಮಗಳಿಗೆ ವೈದ್ಯರು ಎಂದು ವಿವರಿಸಿದ್ದಾರೆ.
ಇನ್ನೊಂದೆಡೆ ಆಸ್ಪತ್ರೆಗೆ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಬಂದಿದ್ದಾರೆ. ಪುನೀತ್ ಅವರ ಮನೆ ಬಳಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಇದೇ ವೇಳೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಚಿವ ಆರ್.ಅಶೋಕ್, ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇನ್ನು ನಟರಾದ ಯಶ್, ರವಿಚಂದ್ರನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಆಸ್ಪತ್ರೆಗೆ ಧಾವಿಸಿದ್ದಾರೆ.