ನವದೆಹಲಿ, ಅ.29 (DaijiworldNews/PY): ಭಾರತೀಯ ಸಶಸ್ತ್ರ ಪಡೆಗಳ ಕೆಡೆಟ್ಗಳಂತೆಯೇ ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ ಮಹಿಳಾ ಕೆಡೆಟ್ಗಳನ್ನು ಸ್ವಾಗತಿಸುವಂತೆ ಸೇನಾ ಮುಖ್ಯಸ್ಥ ಎಂ ಎಂ ನರವಾಣೆ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಆಧುನಿಕ ಯುದ್ಧಗಳಲ್ಲಿ ಯಾವುದೇ ಒಂದು ಸೇನೆಯು ಹೋರಾಡಲು ಹಾಗೂ ಗೆಲ್ಲಲು ಸಾಧ್ಯವಿಲ್ಲ" ಎಂದಿದ್ದಾರೆ.
ರಕ್ಷಣಾ ಹಾಗೂ ನೌಕಾಪಡೆ ಅಕಾಡೆಮಿ ಪರೀಕ್ಷೆಗೆ ಹಾಜರಾಗಲು ಮಹಿಳೆಯರಿಗೆ ಅನುಮತಿ ಇದೆ. ಅವರು ಎನ್ಡಿಎ ಪರೀಕ್ಷೆ ತರಬೇತಿಯನ್ನು ಕೂಡಾ ಪಡೆಯಬಹುದಾಗಿದೆ. ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಅಧಿಸೂಚನೆ ಹೊರಡಿಸಬೇಕು. ಹಾಗೆಯೇ ಅಗತ್ಯ ಪ್ರಚಾರ ನೀಡಬೇಕು ಎಂದು ಕೇಂದ್ರ ಲೋಕ ಸೇವಾ ಆಯೋಗಕ್ಕೆ ನ್ಯಾಯಪೀಠ ನಿರ್ದೇಶನ ನೀಡಿದೆ.
"ಮಹಿಳಾ ಕೆಡೆಟ್ಗಳಿಗಾಗಿ ನಾವು ಎನ್ಡಿಎ, ಗೇಟ್ಗಳನ್ನು ತೆರೆಯುತ್ತಿದ್ದಂತೆ ಪ್ರಪಂಚದಾದ್ಯಂತ ಹೆಸರುವಾಸಿಯಾಗಿರುವ ಭಾರತೀಯ ಸಶಸ್ತ್ರ ಪಡೆಗಳ ನೀವೆಲ್ಲರೂ ಕೂಡಾ ನ್ಯಾಯಯುತ ರೀತಿಯಲ್ಲಿ ಅವರನ್ನು ಸ್ವಾಗತಿಸುತ್ತೀರಿ ಎಂದು ನಾನು ನಿರೀಕ್ಷಿಸುತ್ತೇನೆ" ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ ಮಹಿಳೆಯರ ಸೇರ್ಪಡೆಗೆ ಅನುಮತಿ ನೀಡಲಾಗಿದ್ದು, ಮೇ 2022ರೊಳಗೆ ಪ್ರವೇಶ ಪರೀಕ್ಷೆಯ ಅಧಿಸೂಚನೆಯನ್ನು ಯುಪಿಎಸ್ಸಿ ಮೂಲಕ ಪ್ರಕಟಿಸುವುದಾಗಿ ಕೇಂದ್ರ ರಕ್ಷಣಾ ಸಚಿವಾಲಯ ಕಳೆದ ತಿಂಗಳು ಸುಪ್ರೀಂಕೋರ್ಟ್ಗೆ ತಿಳಿಸಿತ್ತು.