ಬೆಂಗಳೂರು, ಅ.29 (DaijiworldNews/HR): ಜಿಮ್ ಕಸರತ್ತು ನಡೆಸುತ್ತಿದ್ದಂತ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಂತಹ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದು, ಇದೀಗ ಅವರು ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಇಂದು ಬೆಳಿಗ್ಗೆ 11.30ಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ತೀವ್ರ ಹೃದಯಾಘಾತಕ್ಕೆ ಒಳಗಾಗಿ, ಖಾಸಗಿ ಕ್ಲಿನಿಕ್ ಒಂದರಲ್ಲಿ ಇಸಿಜಿ ಮಾಡಿಸಿಕೊಂಡು ಬಂದು, ವಿಕ್ರಂ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು.
ಹೃದಯಾಘಾತಕ್ಕೆ ಒಳಗಾದ ಅವರಿಗೆ ಕಡೆಯ ಕ್ಷಣದವರೆಗೂ ಎಲ್ಲಾ ರೀತಿಯ ಪ್ರಯತ್ನವನ್ನು ನಡೆಸಿದರೂ, ಚಿಕಿತ್ಸೆಗೆ ಪ್ರತಿಸ್ಪಂದಿಸದ ಕಾರಣ, ಇಂದು ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಹಲೋಕ ತ್ಯಜಿಸಿದ್ದಾರೆ.