ಬೆಂಗಳೂರು, ಅ.29 (DaijiworldNews/HR): ಸ್ಯಾಂಡಲ್ವುಡ್ ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ಧಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ಕ್ರೂರ ವಿಧಿಯು ಪುನೀತ್ ರಾಜ್ಕುಮಾರ್ ಎಂಬ ಪ್ರತಿಭಾವಂತ ನಟನನ್ನು ನಮ್ಮಿಂದ ಕಿತ್ತುಕೊಂಡಿದೆ. ಇದು ಸಾಯುವ ವಯಸ್ಸಾಗಿರಲಿಲ್ಲ. ಮುಂಬರುವ ಪೀಳಿಗೆಗಳು ಅವರ ಚಿತ್ರಗಳು ಮತ್ತು ಅದ್ಭುತ ವ್ಯಕ್ತಿತ್ವಕ್ಕಾಗಿ ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.
ಇನ್ನು ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಪುನೀತ್ ಜೊತೆ ತೆಗೆಸಿಕೊಂಡ ಫೋಟೊವನ್ನು ಹಂಚಿಕೊಂಡಿದ್ದಾರೆ.