ಬೆಂಗಳೂರು, ಅ. 29 (DaijiworldNews/SM): ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್(46) ವಿಧಿವಶರಾಗಿದ್ದು, ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಗೆ ರಾಜ್ಯ ಸರಕಾರ ಅಧಿಸೂಚನೆ ಪ್ರಕಟಿಸಿದ್ದು, ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.
ಸರಕಾರದ ಅಧಿಸೂಚನೆ ಪ್ರಕಾರ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಇಲ್ಲಿನ ಅಪ್ಪು ಪೋಷಕರಾದ ಡಾ. ರಾಜ್ ಕುಮಾರ್ ಹಾಗೂ ಪಾರ್ವತಮ್ಮ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ. ಸಕಲ ಸರಕಾರಿ ಗೌರವಗಳೊಂದಿಗೆ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ರವಿವಾರದಂದು ಅಂತ್ಯಕ್ರಿಯೆ ನಡೆಯಲಿದೆ.
ಸದ್ಯ ಕಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಅಭಿಮಾನಿಗಳು ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಈ ನಡುವೆ ಚಿತ್ರ ರಂಗದ ಗಣ್ಯರು, ಹಿರಿಯ ನಟರು ಕೂಡ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಕಠೀರವ ಸ್ಟುಡಿಯೋದಲ್ಲಿ ಕುಟುಂಬಸ್ಥರ, ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದೆ.