ಪಣಜಿ, ಅ. 30(DaijiworldNews/HR): ಕಾಂಗ್ರೆಸ್ ಪಕ್ಷವು ರಾಜಕೀಯದ ಬಗ್ಗೆ ಗಂಭೀರವಾಗಿ ಚಿಂತಿಸದಿದ್ದರೇ ಪ್ರಧಾನಿ ನರೇಂದ್ರ ಮೋದಿ ಮತ್ತಷ್ಟು ಶಕ್ತಿಶಾಲಿಯಾಗುತ್ತಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ರಾಜಕೀಯವನ್ನು ಕಾಂಗ್ರೆಸ್ ಪಕ್ಷವು ಗಂಭೀರವಾಗಿ ಪರಿಗಣಿಸದ ಕಾರಣ ಈಗಲೇ ಮೋದಿ ಅವರು ಕಾಂಗ್ರೆಸ್ ಗಿಂತ ಹೆಚ್ಚು ಶಕ್ತಿಶಾಲಿಯಾಗಲಿದ್ದಾರೆ" ಎಂದರು.
ಇನ್ನು ಈ ಹಿಂದೆ ಕಾಂಗ್ರೆಸ್ ಗೆ ಅವಕಾಶ ಸಿಕ್ಕಿತು. ಬಿಜೆಪಿ ವಿರುದ್ಧ ಹೋರಾಡುವ ಬದಲು ನನ್ನ ರಾಜ್ಯದಲ್ಲಿ ನನ್ನ ವಿರುದ್ಧ ಸ್ಪರ್ಧಿಸಿದ್ದಾರೆ" ಎಂದಿದ್ದಾರೆ
ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಸೀಟು ಹಂಚಿಕೆ ಮಾಡುವುದರಲ್ಲಿ ಟಿಎಂಸಿ ನಂಬಿಕೆ ಹೊಂದಿದ್ದು, ಮುಂಬರುವ ಗೋವಾ ಚುನಾವಣೆಯಲ್ಲಿ ಎಲ್ಲಾ 40 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಟಿಎಂಸಿ ಘೋಷಿಸಿದೆ.