ಬೆಂಗಳೂರು, ಅ.30 (DaijiworldNews/PY): ನಟ ಪುನೀತ್ ರಾಜ್ ಕುಮಾರ್ ಅವರ ಪುತ್ರಿ ದೃತಿ ನ್ಯೂಯಾರ್ಕ್ನಿಂದ ದೆಹಲಿಗೆ ಆಗಮಿಸಿದ್ದು, ದೆಹಲಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಅಮೇರಿಕಾದಿಂದ ಪ್ರಯಾಣಿಸಿದ್ದ ಅವರು ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದ್ದು, ಏರ್ ಇಂಡಿಯಾದ ವಿಶೇಷ ವಿಮಾನ 502ರ ಮೂಲಕ ಬೆಂಗಳೂರಿಗೆ ತಲುಪುತ್ತಾರೆ.
ದೃತಿ ಅವರು ಸಂಜೆ 4.15 ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಅಲ್ಲಿಂದ ನೇರವಾಗಿ ಕಂಠೀರವ ಸ್ಟುಡಿಯೋಗೆ ತೆರಳಲಿದ್ದು, ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಮೆರವಣಿಗೆಗೆ ಸಿದ್ಧತೆ ನಡೆಸಲಾಗಿದೆ.